ಸಮಗ್ರ ನ್ಯೂಸ್: ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದರು ಎನ್ನಲಾಗಿತ್ತು. ಸದ್ಯ ಈ ಕುರಿತು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಆಶ್ರಯ ನೀಡಿದ್ದರೆ ಪೊಲೀಸರು ವಿಚಾರಣೆಗೆ ಕರೆಯಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಸಿಸಿಬಿ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚೈತ್ರಾ ಕುಂದಾಪುರ ಭೇಟಿಯಾಗಿ ಒಂದು ವರ್ಷ ಆಗಿದೆ. ಐದು ವರ್ಷದ ಹಿಂದಿನ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಆ ಮೂಲಕ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಅಂಜುಂಗೆ ಸಂಕಷ್ಟ ಎದುರಾಗಿತ್ತು.
]