ನಿಪಾ ವೈರಸ್ ಭೀತಿ| 7 ಗ್ರಾಮಗಳಲ್ಲಿ ಕಂಟೈನ್ ಮೆಂಟ್ ಝೋನ್ ಸ್ಥಾಪನೆ| ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಿಪಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು,ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ.

Ad Widget ... ..

ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಪಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದ್ದು, ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.

Ad Widget

ಇನ್ನು ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *