ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಉದ್ಯಮಿ ಗೋವಿಂದ ಬಾಬುಗೆ ಸಿಸಿಬಿ ಬುಲಾವ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ದೂರುದಾರ ಗೋವಿಂದ ಬಾಬು ಪೂಜಾರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದಾರೆ.

Ad Widget ... ..

ಸಿಸಿಬಿ ಪೊಲೀಸರು ಗೋವಿಂದ ಬಾಬು ಬಳಿ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ. ಒಂದು ಪಕ್ಷ ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ ಎದುರಾಗಲಿದೆ.

Ad Widget

ಈಗಾಗಲೇ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ವಿಜಯನಗರದ ನಿವಾಸ, ಕೆಕೆ ಗೆಸ್ಟ್ ಹೌಸ್, ಗೋವಿಂದ ಬಾಬು ಪೂಜಾರಿ ಕಚೇರಿ ಸೇರಿ ಹಲವೆಡೆ ಮಹಜರು ನಡೆಸಲಾಗಿದೆ. ಸದ್ಯ ಐದು ಕೋಟಿ ಮೂಲದ ಹುಡುಕಾಟದಲ್ಲಿ ಸಿಸಿಬಿ ಇದೆ.

Leave a Comment

Your email address will not be published. Required fields are marked *