ಸಮಗ್ರ ನ್ಯೂಸ್:ನಿನ್ನೆ(ಸೆ.18) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಅಂಗೀಕರಿಸಲು ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ಅಥವಾ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಾಯ್ದಿರಿಸಲು ಈ ಕಾಯ್ದೆಯಲ್ಲಿ ಪ್ರಸ್ತಾಪಿಸಿದೆ.
ಈ ಮಸೂದೆಯು ಎಸ್ಸಿ, ಎಸ್ಟಿ ಮತ್ತು ಆಂಗ್ಲೋ-ಇಂಡಿಯನ್ನರಿಗೆ ಶೇಕಡಾ 33 ರಷ್ಟು ಕೋಟಾದೊಳಗೆ ಉಪ ಮೀಸಲಾತಿಯನ್ನುಕೂಡ ಪ್ರಸ್ತಾಪಿಸುತ್ತದೆ.
ಪ್ರತಿ ಸಾರ್ವತ್ರಿಕ ಚುನಾವಣೆಯ ನಂತರ ಮೀಸಲು ಸ್ಥಾನಗಳನ್ನು ಬದಲಾವಣೆ ಮಾಡಬೇಕು ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ನೀಡಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಮೂಲಗಳ ಪ್ರಕಾರ, ಮಸೂದೆಯನ್ನು ನಾಳೆ ಹೊಸ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ.