ಸಮಗ್ರ ನ್ಯೂಸ್: ಸೆಪ್ಟೆಂಬರ್ 22ರಿಂದ 27ರವರೆಗೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಕರ್ನಾಟಕದ ಆಟಗಾರ ಕೆ ಎಲ್ ರಾಹುಲ್ ನಾಯಕತ್ವ ವಹಿಸಲಿದ್ದು, ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ಏಷ್ಯಾ ಕಪ್ ಗೆಲುವಿನ ಹುಮ್ಮಸ್ಸಿನಲ್ಲಿ ಇರುವ ಭಾರತ ತಂಡ, ಸೆಪ್ಟೆಂಬರ್ 22, 24 ಮತ್ತು 27 ರಂದು ಏಕದಿನ ಪಂದ್ಯಗಳಲ್ಲಿ ಆಡಲಿದೆ.
ಈ ಸರಣಿಯ ಮೂಲಕ ಭಾರತ ತಂಡಕ್ಕೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಾಪಾಸಾಗಲಿದ್ದು, ಮೊದಲೆರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ವಿಶ್ರಾಂತಿ ಪಡೆಯಲಿದ್ದಾರೆ.
ಭಾರತ ತಂಡ (ಮೊದಲೆರಡು ಪಂದ್ಯಗಳಿಗೆ): ಕೆ ಎಲ್ ರಾಹುಲ್ (ನಾಯಕ) ಶುಭ್ ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಪ್ರಸಿದ್ಧ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್
ಕೊನೆಯ ಪಂದ್ಯಕ್ಕೆ: ರೋಹಿತ್ ಶರ್ಮಾ (ನಾಯಕ) ಹಾರ್ದಿಕ್ ಪಾಂಡ್ಯ ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್