ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿತ್ತು. ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸತಕ್ಕದೆಂದು ಎಂದು ಹೇಳಿದ್ದಾರೆ.
ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದ್ದು ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.