ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು (ಸೆ.20) ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಕೂಡ ಇಂದು ಗುಡು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 82 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಇಂದು ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಉತ್ತರ ಒಳನಾಡು ಜಿಲ್ಲೆಗಳಲ್ಲೂ ಕೂಡ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಆದರೆ ಇಂದು ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಬರಲಿದ್ದರೇ, ರಾಯಚೂರು ಮತ್ತು ಯಾದಗಿರಿಯಲ್ಲಿ ಒಣಹವೆ ಇರಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗವು ಗಂಟೆಗೆ 30-40 ಕಿಮೀ ಇರಲಿದೆ.