Ad Widget .

ರಾಜ್ಯಾದ್ಯಂತ ಭುಗಿಲೆದ್ದ ಕಾವೇರಿ ಕಾವು| ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲಿರುವ ಕರವೇ

ಸಮಗ್ರ ನ್ಯೂಸ್: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ, ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ನಾಳೆ ರಾಜ್ಯ ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಡೆಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಾವಣಗೆರೆಯಲ್ಲಿ ಕರವೇ ಕಾರ್ಯಕರ್ತರು ಸಂಸದ ಜಿಎಂಸಿದ್ದೇಶ್ವರ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರಾಜ್ಯದ ಹಿತ ಕಾಪಡಲಿಲ್ಲವೆಂದು ಸಂಸದರ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ.ಬರಿದಾಗಿರುವ ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ ಎಂದು ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಜೋಶಿ ‘ಮಾರಣಾಂತಿಕ ತೀರ್ಪು ಕೊಟ್ಟಿದ್ದಾರೆ. ಕಾವೇರಿ ಕೊಳ್ಳದ ಡ್ಯಾಮ್ ಗಳು ಬರಿದಾಗುತ್ತಿವೆ ಎಂದು ಕಿಡಿಕಾರಿದ್ದಾರೆ.

Ad Widget . Ad Widget . Ad Widget .

ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿದ್ದಾರೆ. ರೈತರ ಪ್ರತಿಭಟನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಸೇರಿದಂತೆ ಹಲವರು ಬೆಂಬಲ ನೀಡಿದ್ದಾರೆ.

Leave a Comment

Your email address will not be published. Required fields are marked *