Ad Widget .

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರ ಮತ್ತೊಂದು ಕಾರ್ಯಾಚರಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಳ್ಳಾಲದ ಸುಭಾಷ್‌ನಗರ ಮನೆ ಜಾಕೀರ್‌ (29), ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮ ಕಾರ್ತಿಕ್ ಸುವರ್ಣ(27) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್ ಗಳು-2, ನಗದು ರೂ. 3,300 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,15,000 ಎಂದು ಅಂದಾಜಿಸಲಾಗಿದೆ.

Ad Widget . Ad Widget . Ad Widget .

ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿತ್ತು. ಇನ್ನೋರ್ವ ಆರೋಪಿ ಕಾರ್ತಿಕ್ ಎಂಬಾತನ ವಿರುದ್ದ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಕೇಸು ದಾಖಲಾಗಿತ್ತು.

ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

Leave a Comment

Your email address will not be published. Required fields are marked *