ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಸ್ಥಾಪನೆಗೆ ಕಾಶ್ಮೀರ ವಿಚಾರವೇ ನಿರ್ಣಾಯಕವಾದುದು ಎಂದು ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್ ಉಲ್ ಕಾಕರ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೇಳಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನದಲ್ಲಿ ಮಾತನಾಡಿದ ಕಾಕರ್, ‘ ಪಾಕ್ ತನ್ನ ನೆರೆಯ ರಾಷ್ಟ್ರಗಳ ಜೊತೆಗೆ ಶಾಂತಿಯುತವಾದ ಬಾಂಧವ್ಯವನ್ನು ಹೊಂದಲು ಇಷ್ಟಪಡುತ್ತದೆ. ಭಾರತದ ಜೊತೆ ಶಾಂತಿಯುತ ಬಾಂಧವ್ಯವನ್ನು ಹೊಂದಲು ಕಾಶ್ಮೀರ ವಿಷಯವೇ ನಿರ್ಣಾಯಕವಾದುದು. ಕಾಶ್ಮೀರ ಕುರಿತಂತೆ ತನ್ನ ನಿರ್ಣಯವನ್ನು ಜಾರಿಗೊಳಿಸಲು ಭದ್ರತಾ ಮಂಡಳಿ ಮಹತ್ವ ನೀಡಬೇಕು ಮತ್ತು ಸೇನಾ ವೀಕ್ಷಣಾ ಪಡೆಯನ್ನು ನಿಯೋಜಿಸಬೇಕು ಎಂದು ಕಾಕರ್ ಒತ್ತಾಯಿಸಿದ್ದಾರೆ.
ಪಾಕಿಸ್ತಾನವು ವಿಶ್ವಸಂಸ್ಥೆಯ ವಿವಿಧ ವೇದಿಕೆಗಳಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪ ಮಾಡುವುದು ಸಾಮಾನ್ಯವಾಗಿದ್ದು, ಈಗ ಮತ್ತೊಮ್ಮೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದೆ.