ಸೆ.26: ಕಾವೇರಿಗಾಗಿ ಬೆಂಗಳೂರು ಬಂದ್

ಸಮಗ್ರ ನ್ಯೂಸ್: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರೋದನ್ನು ಖಂಡಿಸಿ ಬೆಂಗಳೂರು ನಗರದಲ್ಲಿ ಪ್ರತಿಭಟನೆ ಜೋರಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್.26ರಂದು ಬೆಂಗಳೂರು ಬಂದ್ ಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಘೋಷಣೆ ಮಾಡಿದ್ದಾರೆ.

Ad Widget ... ..

ರಾಜ್ಯದ ರೈತರಿಗೆ ಕುಡಿಯೋದಕ್ಕೆ ನೀರಿಲ್ಲ. ಬೆಂಗಳೂರು ಜನತೆಗೂ ಕಾವೇರಿ ನೀರು ಸಮಸ್ಯೆ ಆಗಲಿದೆ. ಹೀಗಿದ್ದೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರೋದು ಸರಿಯಲ್ಲ. ರಾಜ್ಯ ಸರ್ಕಾರ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು, ತಮಿಳುನಾಡಿಗೆ ನೀರು ಬಿಡದಂತ ನಿರ್ಣಯವನ್ನು ಕೈಗೊಳ್ಳಬೇಕು ಅಂತ ಆಗ್ರಹಿಸಿದರು.

Ad Widget

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸೋದನ್ನು ಖಂಡಿಸಿ ಸೆಪ್ಟೆಂಬರ್ 26ರ ಮಂಗಳವಾರದಂದು ಬೆಂಗಳೂರು ಬಂದ್ ನಡೆಸಲಾಗುತ್ತದೆ. ಅಂದು ಶಾಲಾ-ಕಾಲೇಜುಗಳು ಮಕ್ಕಳಿಗೆ ತೊಂದರೆಯಾಗದಂತೆ ರಜೆ ನೀಡಬೇಕು. ಬೆಂಗಳೂರು ಜನತೆ ಸ್ವಯಂ ಪ್ರೇರಿತವಾಗಿ ಬಂದ್ ನಲ್ಲಿ ಭಾಗವಹಿಸಬೇಕು. ಇದು ಕಾವೇರಿ ಹೋರಾಟದ ಪ್ರತಿಭಟನೆಯಂತ ತಿಳಿಯಬಾರದು. ಬೆಂಗಳೂರು ಜನತೆ ನೀರಿನ ಹೋರಾಟ ಅಂತ ತಿಳಿಯಬೇಕು ಎಂದು ಹೇಳಿದರು.

Leave a Comment

Your email address will not be published. Required fields are marked *