ಮಂಡ್ಯ ಸ್ಥಬ್ದ/ ಕಾವೇರಿಗಾಗಿ ಬಂದ್ ಆಗುತ್ತಾ ಕರ್ನಾಟಕ?

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ವಿವಾದ ವಿಚಾರದಲ್ಲಿ ಇಂದು ಜಿಲ್ಲಾ ಹಿತರಕ್ಷಣಾ ಸಮಿತಿ ಕರೆ ಕೊಟ್ಟಿದ್ದ ಮಂಡ್ಯ ಬಂದ್ ಯಶಸ್ವಿಯಾಗಿದ್ದು, ಜನರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

Ad Widget ... ..

ಮಂಡ್ಯ ಮತ್ತು ಮದ್ದೂರಿನಲ್ಲಿ ವಾಣಿಜ್ಯ ಚಟುವಟಿಕೆ ಸಂಪೂರ್ಣ ಮುಚ್ಚಿದ್ದು, ಶಾಲಾ ಕಾಲೇಜುಗಳು ಬಾಗಿಲು ತೆರೆದಿಲ್ಲ. ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಬ್ದಗೊಂಡಿದೆ.

Ad Widget

ಬಂದ್ ಆಗುತ್ತಾ ಕರ್ನಾಟಕ: ಮಂಡ್ಯ ಬಂದ್ ಯಶಸ್ವಿ ಹಿನ್ನಲೆಯಲ್ಲಿ, ರೈತರ ಪ್ರತಿಭಟನೆ ರಾಜ್ಯಮಟ್ಟಕ್ಕೆ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಇಂದು ಸಂಜೆ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಸಭೆಯಲ್ಲಿ ಮುಂದಿನ ನಡೆಯ ಕುರಿತಾಗಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ನೂರಕ್ಕೂ ಹೆಚ್ಚು ಸಂಘಟನೆಗಳು ಭಾಗವಹಿಸಲಿವೆ.

Leave a Comment

Your email address will not be published. Required fields are marked *