ಸಮಗ್ರ ನ್ಯೂಸ್: ನೈರುತ್ಯ ಮುಂಗಾರು ತನ್ನ ಅಂತಿಮ ಹಂತವನ್ನು ಪ್ರವೇಶಿಸಿದ್ದು, ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದ ಆರು ಜಿಲ್ಲೆಗಳು ಹಾಗೂ ಕರ್ನಾಟಕದ ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಮತ್ತು ಪಾಲಕ್ಕಾಡ್ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜಾರ್ಖಂಡ್ನಲ್ಲಿ ಚಂಡಮಾರುತದ ಪ್ರಭಾವದಿಂದ ಇನ್ನೂ ಕೆಲವು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಕರ್ನಾಟಕದ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಭಾನುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.