Ad Widget .

ಸೆ.28ರಂದು ಹಸಿ ಮೀನು ಮಾರಾಟ ಮಾಡಿದರೆ ಎಚ್ಚರ| ಬ್ಯಾನರ್ ಅಳವಡಿಸಿದ ವ್ಯಾಪಾರಸ್ಥರ ಸಂಘ| ವಿಹಿಂಪ ಗರಂ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಂಘಟನೆ

ಸಮಗ್ರ ನ್ಯೂಸ್: ಹಸಿ ಮೀನು ಮಾರುವವರಿಗೆ ನೀಡಿರುವ ಎಚ್ಚರಿಕೆ ಫಲಕದ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅದು ವೈರಲ್ ಕೂಡ ಆಗಲಾರಂಭಿಸಿದೆ. ಅಷ್ಟಕ್ಕೂ ಇಂಥದ್ದೊಂದು ಎಚ್ಚರಿಕೆಯನ್ನು ಹಸಿ ಮೀನು ವ್ಯಾಪಾರಸ್ಥರ ಸಂಘವೊಂದು ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

28ರ ಈದ್ ಮಿಲಾದ್ ದಿನದಂದು ಮೀನು ಮಾರಾಟ ಮಾಡಬಾರದು, ಅಂದು ವ್ಯಾಪಾರಸ್ಥರು ಕಡ್ಡಾಯವಾಗಿ ರಜೆ ಮಾಡಬೇಕು ಎಂದು ಮಂಗಳೂರಿನ ಸೌತ್​ವಾರ್ಫ್​ ಬಂದರು ಪ್ರದೇಶದ ಹಸಿ ಮೀನು ವ್ಯಾಪಾರಸ್ಥರ ಸಂಘ ಸಂದೇಶ ರವಾನಿಸಿದೆ. ಮಾತ್ರವಲ್ಲ, ಈ ಕುರಿತು ದೊಡ್ಡದೊಂದು ಬ್ಯಾನರ್ ಕೂಡ ಹಾಕಿದೆ. ಇದೀಗ ಈ ಬ್ಯಾನರ್ ಫೋಟೋ ಎಲ್ಲೆಡೆ ಹರಿದಾಡಲಾರಂಭಿಸಿದ್ದು, ಚರ್ಚೆಗೆ ಒಳಗಾಗುತ್ತಿದೆ.

Ad Widget . Ad Widget . Ad Widget .

ಸೆ. 28ರ ಬೆಳಗ್ಗೆ 3.45ರ ನಂತರ ಹಸಿ ಮೀನು ವ್ಯಾಪಾರಿಗಳು ವ್ಯಾಪಾರ ಮಾಡದೆ ಕಡ್ಡಾಯವಾಗಿ ರಜೆ ಮಾಡಬೇಕು. ಒಂದು ವೇಳೆ ರಜೆ ಮಾಡದಿದ್ದರೆ ಅಂಥವರು ಒಂದು ತಿಂಗಳ ಕಾಲ ಬಂದರು ಧಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಕಾನೂನುಕ್ರಮ ಕೈಗೊಳ್ಳುವ ಜೊತೆಗೆ ದಂಡನೆಯನ್ನು ವಿಧಿಸಬೇಕಾಗುತ್ತದೆ. ಅಲ್ಲದೆ ಸಂಘದ ಯಾವುದೇ ಸಹಕಾರದಿಂದ ವಂಚಿತರಾಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘ ಎಚ್ಚರಿಕೆ ನೀಡಿದೆ.

ಬ್ಯಾನರ್ ಬಗ್ಗೆ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ವಿರೋಧ ವ್ಯಕ್ತಪಡಿಸಿ, ಧಕ್ಕೆಯಲ್ಲಿ ದಂಡನೆ ವಿಧಿಸಲು ಶರಿಯತ್ ಕಾನೂನು ಜಾರಿಯಲ್ಲಿದೆಯಾ? ಎಂದು ಪ್ರಶ್ನಿಸಿದ್ದಾರೆ. ಇವರ ಬೆದರಿಕೆಯ ತಂತ್ರಗಳಿಗೆ ಹಿಂದೂ ಮೀನುಗಾರರು ಮಣಿಯಬಾರದು. ನಿಮ್ಮೊಂದಿಗೆ ಹಿಂದೂ ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರ್ ಹಾಕಿದ ಅವರ ವಿರುದ್ದಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಮಂಗಳೂರು ಧಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘದ ಅಧ್ಯಕ್ಷ ಕೆ.ಅಶ್ರಫ್ ಸ್ಪಷ್ಟನೆ ನೀಡಿದ್ದು, ಮಂಗಳೂರು ಧಕ್ಕೆಯಲ್ಲಿ ಸಂಘದ ಸಭೆಯ ನಿರ್ಣಯದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘದ ಸದಸ್ಯರ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ ವ್ಯವಹಾರಕ್ಕೆ ಕಡ್ಡಾಯ ರಜೆ ಹೊಂದುವ ಪೂರ್ವ ನಿರ್ಧರಿತ ಪದ್ಧತಿಯಂತೆ ಈ ಬರುವ ತಾರೀಕು 28 ಸೆಪ್ಟೆಂಬರ್ 2023 ರಂದು ಮುಸ್ಲಿಮ್ ಭಾಂದವರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಅವರು ಮತ್ತು ಇತರ ಧರ್ಮ ಭಾಂದವರು ಕಡ್ಡಾಯ ರಜೆ ಪಾಲಿಸುವ ಬಗ್ಗೆ ವಿವಿಧ ಸಂಘಗಳಲ್ಲಿ ನಿರ್ಣಯಿಸಿದಂತೆ ಪ್ರಕಟಣೆ ಫಲಕ ಅಳವಡಿಸಲಾಗಿರುತ್ತದೆ. ಅದೇ ರೀತಿಯಲ್ಲಿ ವರ್ಷದ ಇತರ ದಿನಗಳಲ್ಲಿ ಇತರ ಹಬ್ಬಗಳಾದ ಬಾರ್ಕೂರು ಪೂಜೆ,ಉಚ್ಚಿಲ ಪೂಜೆ, ಗಣೇಶ ಚತುರ್ಥಿ, ಈದ್ ಉಲ್ ಫಿತರ್, ಬಕ್ರೀದ್, ಈದ್ ಮಿಲಾದ್, ಗುಡ್ ಫ್ರೈಡೇ ಮತ್ತು ಕ್ರಿಸ್ಮಸ್ ಎಂಬಿತ್ಯಾದಿ ಶುಭ ದಿನಗಳಲ್ಲಿ ಕೂಡಾ ಸಂಘಗಳ ನಿರ್ಣಯದಂತೆ ಮಾರಾಟಗಾರರು ಖಡ್ಡಾಯ ರಜೆ ಹೊಂದಿ ಆ ದಿನದ ಮಟ್ಟಿಗೆ ಮೀನುಗಾರಿಕಾ ಮಾರಾಟ ಚಟುವಟಿಕೆ ಸ್ಥಗಿತ ಗೊಳಿಸುವುದು ಅನೇಕ ವರ್ಷಗಳಿಂದ ನಡೆದು ಕೊಂಡು ಬಂದಿರುತ್ತದೆ.

ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆಯಲ್ಲಿ ಹಸಿ ಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ, ಪರ್ಶಿಯನ್ ಬೋಟ್ ಯೂನಿಯನ್, ಟ್ರಾಲ್ ಬೋಟ್ ಯೂನಿಯನ್, ಫಿಶ್ ಬಯ್ಯರ್ಸ್ ಎಸೋಸಿಯೇಶನ್ ಮತ್ತಿತರ ಸಂಘಗಳು ಸಂಯುಕ್ತವಾಗಿ ಈ ರಜೆಗಳನ್ನು ನಿರ್ಧರಿಸಲಾಗಿದೆ
ಆದರೆ ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಸಂಘದ ಈದ್ ಮಿಲಾದ್ ರಜೆಯ ಬ್ಯಾನರ್ ಬಗ್ಗೆ ಕೆಲವರು ಪ್ರಚೋದನಾತ್ಮಕ ಮಾಹಿತಿ ಹಂಚುತ್ತಿರುವುದು ಖೇದಕರ. ಇಂತಹ ತಪ್ಪು ಮಾಹಿತಿಗಳಿಂದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದಾಗಿ ವಿನಂತಿಸಿದ್ದಾರೆ.

Leave a Comment

Your email address will not be published. Required fields are marked *