ಅಯೋಧ್ಯಾ ರಾಮ‌ ಮಂದಿರ/ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಸಾಧ್ಯತೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿ ಇದ್ದು, ಮುಂದಿನ ವರ್ಷದ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಾಧ್ಯತೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

Ad Widget .

ಜನವರಿ 20ರಿಂದ 24ರವರೆಗೆ ನಡೆಯುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಮೂರ್ತಿ ಪ್ರತಿಷ್ಠಾಪನೆಯ ದಿನಾಂಕವನ್ನು ನಿರ್ಧರಿಸಿ, ಪ್ರಧಾನಿಯವರಿಗೆ ತಿಳಿಸಬೇಕಿದೆ ಎಂದು ಮಿಶ್ರಾ ಹೇಳಿದ್ದಾರೆ.

Ad Widget . Ad Widget .

ಈ ವರ್ಷದ ಅಂತ್ಯಕ್ಕೆ ನೆಲಮಹಡಿಯ ಕಾಮಗಾರಿ ಅಂತ್ಯಗೊಳ್ಳಲಿದ್ದು, ಜನವರಿ ತಿಂಗಳ ಕೊನೆಯ ವಾರದಲ್ಲಿ ಮೂರ್ತಿ ಪ್ರತಿಷ್ಟಾಪನೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ‌.

Leave a Comment

Your email address will not be published. Required fields are marked *