Ad Widget .

ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಸುಳ್ಯದ ಯುವಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಿಸಿಬಿ ಪೊಲೀಸರ ಸೆರೆಯಾಗಿದ್ದಾನೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರಿನ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯದ ಹಳಗೇಟಿನಲ್ಲಿರುವ ಆಲ್ಫಮ್ ಕಾರ್ನರ್ ಹೊಟೇಲ್ ನ ಮಾಲೀಕ ಡೆಲ್ಮಾ ಮುಸ್ತಫಾ ಎಂಬವರ ಮಗ ಲುಕುಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದು. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ‌ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

Ad Widget . Ad Widget . Ad Widget .

ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು, ಡ್ರಗ್ಸ್ ಮುಕ್ತ ಮಂಗಳೂರನ್ನಾಗಿಸಲು ಅಖಾಡಕ್ಕಿಳಿದಿದ್ದಾರೆ. ಕಾಲೇಜುಗಳಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.

ಇನ್ನೂ ಜು. 27 ರಂದು ಈತನ ತಾಯಿಯ ಕುಟುಂಬದ ವಿರುದ್ಧ ಕೂಡ ಕೊಲೆ ಯತ್ನ ಕಿರುಕುಳದ ಆರೋಪ ದಾಖಲಾಗಿತ್ತು.

ಪ್ರಕರಣದ ಹಿನ್ನಲೆ: ಬೊಳುಬೈಲು ಮನೆಯ ಅಬೂಬಕ್ಕರ್ ರ ಮಗಳು ರಿಹಾ ಫಾತಿಮ ಎಂಬವರು ಗಂಡ ನವಾಜ್ ಹಾಗೂ ಗಂಡನ ತಂದೆ ಅಬ್ಬಾಸ್, ತಾಯಿ ಜೈನಾಬಿ, ಸಹೋದರಿಯರಾದ ಉಮೈಜಾ (ಲುಕುಮಾನುಲ್ ಹಕೀಂ ಈತನ ಚಿಕ್ಕಮ್ಮ) , ಮಿಶ್ರಿಯ ಇವರು ತನಗೆ ದೈಹಿಕ, ಮಾನಸಿಕ ಹಿಂಸೆ ನೀಡುವುದಲ್ಲದೆ, ನವಾಜ್ 2023 ಜು.27 ರಂದು ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ.ಈ ಬಗ್ಗೆ ರಿಹಾ ಫಾತಿಮಾ ಸುಳ್ಯ ಪೋಲೀಸ್ ಠಾಣೆಯಲ್ಲಿ ನವಾಜ್ ಹಾಗೂ ಆತನ ಮನೆಯವರ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೋಲೀಸರು ನವಾಜ್ ನನ್ನು ಬಂಧಿಸಿದ್ದರು. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

Leave a Comment

Your email address will not be published. Required fields are marked *