Ad Widget .

ಸುಳ್ಯ:ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಸಮಗ್ರ ನ್ಯೂಸ್: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2023- 24ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆ. 26ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಶಿಕ್ಷಕಿ ಪ್ರಣವಿ ಎಂ. ವೈಜ್ಞಾನಿಕವಾಗಿ ವಿಕ್ರಂ ಲ್ಯಾಂಡರ್ ರೋವರ್ ಚಲನೆಯ ಮಾದರಿ ಮೂಲಕ ವಿಜ್ಞಾನ ಸಂಘದ ಪರದೆಯನ್ನು ಸರಿಸಿ ವಿನೂತನ ರೀತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿಜ್ಞಾನ ಎಂಬುದು ಜ್ಞಾನದ ಒಂದು ಶಾಖೆ. ಇಂದು ಹಲವಾರು ವೈಜ್ಞಾನಿಕ ಸಂಶೋಧನೆಗಳಿಂದ ಜಗತ್ತು ಮುನ್ನಡೆಯುತ್ತಿದೆ. ವಿಜ್ಞಾನ ನಮ್ಮ ದಿನನಿತ್ಯ ಜೀವನದಲ್ಲಿ ಅಡಕಗೊಂಡಿದೆ. ವಿದ್ಯಾರ್ಥಿಗಳು ಆತ್ಮ ಜ್ಞಾನ ಹೆಚ್ಚಿಸಿಕೊಳ್ಳುವ ಜೊತೆಗೆ ಹೊಸತನ್ನು ಅನ್ವೇಷಿಸುವ ಯೋಚನೆಗಳನ್ನು ಮಾಡಬೇಕು ಎಂದರು.

Ad Widget . Ad Widget . Ad Widget .

ಕಾಲೇಜಿನ ಶೈಕ್ಷಣಿಕ ಸಲಹೆಗಾರ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಮಾತನಾಡಿ ವಿಜ್ಞಾನ ಸಂಘದ ಮುಂದಿನ ಚಟುವಟಿಕೆಗಳಿಗೆ ಶುಭಾಶಯ ಕೋರಿದರು. ವಿಜ್ಞಾನ ಸಂಘದ ಸಂಯೋಜಕ ಹಾಗೂ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಸತ್ಯಪ್ರಕಾಶ್ ದೇರಪ್ಪಜ್ಜನಮನೆ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಸಂಘದ ಖಜಾಂಜಿ ನಿಶ್ಮ ಡಿ.ಸಿ. ಉದ್ಘಾಟಕರನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗಕ್ಕೆ ನೂತನ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಉಷಾ ಎಂ.ಪಿ., ಸಂಜೀವ ಕೆ, , ಅಕ್ಷತಾ, ಕುಲದೀಪ್, ಅಶ್ವಿನಿ, ಕೃತಿಕಾ, ಹರ್ಷಕಿರಣ, ಅಜಿತ್ ಕುಮಾರ್ ಮತ್ತು ಪಲ್ಲವಿ ಹಾಗೂ ಸಿಬ್ಬಂದಿಗಳಾದ ಜಯಂತಿ, ಸೌಮ್ಯ, ಗೀತಾ, ಭವ್ಯ ಮತ್ತು ಶಿವಾನಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ. ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಸಂಘದ ಸದಸ್ಯೆ ಶಿಲ್ಪ ಮತ್ತು ತಂಡದವರು ಪ್ರಾರ್ಥಿಸಿ, ವಿಜ್ಞಾನ ಸಂಘದ ಅಧ್ಯಕ್ಷ ಚರಣ್ ಎಂ. ಸ್ವಾಗತಿಸಿ, ಕಾರ್ಯದರ್ಶಿ ಕೀರ್ತಿಕಾ ಟಿ. ವಂದಿಸಿ, ಸಂಜಯ್ ಮತ್ತು ಯಶಿಕಾ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *