ಸಮಗ್ರ ನ್ಯೂಸ್: ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ ಸೆ. 29ರಂದು ನಡೆಯಲಿದೆ.
ಆದಿ ಚುಂಚನಗಿರಿ ಮಹಾಸಂಸ್ಥಾನ, ಶಾಖಾ ಮಠ, ಕಾವೂರು, ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರಿಂದ ಸುಸಜ್ಜಿತ ಅರಸಿನಮಕ್ಕಿ ಶಾಖೆಯ ಉದ್ಘಾಟನೆಗೊಳ್ಳಲಿದೆ.
ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆ.ಸೌ.ಸ. ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಯುಕ್ತ ಸಹಕಾರಿ ಸಂಘದ ದ.ಕ. ಜಿಲ್ಲಾ ಸಂಯೋಜಕ ವಿಜಯ್ ಬಿ.ಎನ್. ಮತ್ತು ‘ವಿಕಾಸ’ ಅರಸಿನಮಕ್ಕಿ ಕಟ್ಟಡ ಮಾಲಕ ಧರ್ಣಪ್ಪ ಗೌಡ ಭಾಗಿಯಾಗಲಿದ್ದಾರೆ.
ಈ ಸಂದರ್ಭದಲ್ಲಿ ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಮಾಜಿ ಸಚಿವ ಮತ್ತು ಅಧ್ಯಕ್ಷ ಗಂಗಾಧರ ಗೌಡ, ನಿರಖು ಠೇವಣಿ ಪತ್ರ ವಿತರಣೆ ಮಾಡಲಿದ್ದಾರೆ. ಬೆಳ್ತಂಗಡಿ ತಾ. ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಸ್ವ ಸಹಾಯ ಸಂಘದ ಪುಸ್ತಕ ವಿತರಣೆ ಮಾಡಲಿದ್ದಾರೆ. ವಾಣಿ ಸೌಹಾರ್ದ ಕೊ. ಅಪರೇಟ್ಯಿವ್ ಸೊಸೈಟಿ ಅಧ್ಯಕ್ಷ ಹೆಚ್. ಪದ್ಮ ಗೌಡ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಅವರಿಂದ ಗಣಕಯಂತ್ರ ಉದ್ಘಾಟನೆ. ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಅವರಿಂದ ಪ್ರಥಮ ಸಾಲ ಪತ್ರ ವಿತರಣೆ, ಅರಸಿನಮಕ್ಕಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಉಳಿತಾಯ ಖಾತೆ ಪತ್ರ ವಿತರಣೆ ಮಾಡಲಿದ್ದಾರೆ.



























