ಕಾವೇರಿ ನೀರು ಬಿಡಲು ಸಾಧ್ಯವಿಲ್ಲ, ನಾಳೆಯೇ ಮರುಪರಿಶೀಲನಾ ಅರ್ಜಿ ಸಲ್ಲಿಕೆ – ಸಿಎಂ

ಸಮಗ್ರ ನ್ಯೂಸ್: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ‘ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ’ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Ad Widget ... ..

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ನಡೆದ ಸಭೆಯ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Ad Widget

ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರನ್ನು, ಸಂಘ ಸಂಸ್ಥೆಗಳಿಗೆ, ಅಭಿನಂದಿಸಿದ ಮುಖ್ಯಮಂತ್ರಿಗಳು ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಅಧಿಕಾರಿಗಳನ್ನು ಕೂಡ ಅಭಿನಂದಿಸಿದರು.

Leave a Comment

Your email address will not be published. Required fields are marked *