ಸಮಗ್ರ ನ್ಯೂಸ್: ಚೈತ್ರಾ ಮಾದರಿಯ ಮತ್ತೊಂದು ಪ್ರಕರಣ ಬಹಿರಂಗವಾಗಿದ್ದು ಪುತ್ತೂರಿನ ಬಿಜೆಪಿ ಮುಖಂಡರ ಹೆಸರು ಉಲ್ಲೇಖ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟಿಕೆಟ್ ವಿಚಾರದ ಸಂಬಂಧಿಸಿದಂತೆ ನೀಡಿರುವ ದೂರಿನ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟನೆಯನ್ನು ನೀಡಿ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಇದು ಚುನಾವಣಾ ಪೂರ್ವ ಬಿಜೆಪಿ ಟಿಕೆಟ್ ವಿಷಯವಾಗಿದ್ದು, ಪುತ್ತಿಲ ಪರಿವಾರಕ್ಕೂ ರಾಜಶೇಖರ್ ಕೋಟ್ಯಾನ್ ಅವರ ವೈಯುಕ್ತಿಕ ವ್ಯವಹಾರಕ್ಕೂ ಸಂಬಂಧವಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ. ಪತ್ರಿಕಾ ಹೇಳಿಕೆಯಲ್ಲಿ ಏನಿದೆ? 2023ರ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಾಯದಂತೆ ಪಕ್ಷೇತರರಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರು ಸ್ಪರ್ಧಿಸಿದ್ದರು.
ಚುನಾವಣೆಯ ಸಂದರ್ಭದಲ್ಲಿ ಕೇವಲ 20 ದಿನದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ತಾಲೂಕು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ದುಡಿದಿರುವವರಲ್ಲಿ ನೇರಳಕಟ್ಟೆಯ ರಾಜಶೇಖರ್ ಕೋಟ್ಯಾನ್ ಕೂಡ ಓರ್ವರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ರಾಜಶೇಖರ್ ಕೋಟ್ಯಾನ್ ವಿರುದ್ಧ ಕೆಲವು ಆರೋಪಗಳು ಕೇಳಿ ಬರುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ವಿಷಯ ಕರ್ನಾಟಕದ ಹಗರಿಬೊಮ್ಮನಹಳ್ಳಿಯ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೆಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣಾ ಪೂರ್ವ ವ್ಯವಹಾರವಾಗಿದ್ದು, ಈ ಆರೋಪದಲ್ಲಿ ಪುತ್ತಿಲ ಪರಿವಾರದ ಹೆಸರು ಪ್ರಸ್ತಾಪವಾಗಿರುವುದರಿಂದ ಈ ಸ್ಟಷ್ಟನೆ ನೀಡುತ್ತಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬಂದ ದೂರಿನ ಪ್ರತಿಯಲ್ಲಿಯೂ ಪುತ್ತಿಲ ಪರಿವಾರದ ಬಗ್ಗೆ ಉಲ್ಲೇಖವಿಲ್ಲ. ಅವರ ವೈಯುಕ್ತಿಕ ವ್ಯವಹಾರಕ್ಕೂ ನಮ್ಮ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂಬ ಸ್ಪಷ್ಟನೆಯನ್ನು ಮಾಧ್ಯಮದ ಮುಖಾಂತರ ನೀಡುತ್ತಿದ್ದೇವೆ ಎಂದು ಉಲ್ಲೇಖಿಸಿದ್ದಾರೆ.