ಸಮಗ್ರ ನ್ಯೂಸ್: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ.
ನಿನ್ನೆ ಶಿವಮೊಗ್ಗದ ರಾಗಿಗುಡ್ಡದ ಗಲಭೆ ಪೀಡಿತ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಜನರೊಂದಿಗೆ ಮಾತನಾಡುತ್ತಾ ಮನೆಯಲ್ಲಿದ್ದ ಆಯುಧಗಳಿಗೆ ಪೂಜೆ ಮಾಡಿ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದರು.
ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಯಿದ್ದು ನಿಷೇಧಾಜ್ಞೆ ಇದ್ದರೂ ಇದರ ನಡುವೆ ಅರುಣ್ ಕುಮಾರ್ ಪುತ್ತಿಲ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ, ಕಲ್ಲು ತೂರಾಟದಿಂದ ಸಂತ್ರಸ್ತರಾದ ಹಿಂದೂ ಸಮುದಾಯದ ಮನೆಗಳಿಗೆ ಭೇಟಿ ನೀಡಿದ್ದರು.