ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಲಾರಿ

ಸಮಗ್ರ ನ್ಯೂಸ್: ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಘಟನೆ ಅ. 7ರಂದು ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ.

Ad Widget ... ..

ಲಾರಿಯು ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಕ್ಕೆ ಕಮರಿಗೆ ಮಗುಚಿ ಬಿದ್ದಿದೆ. ಪಕ್ಕದಲ್ಲೇ ವಿದ್ಯುತ್ ತಂತಿ ಹಾದು ಹೋಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Ad Widget

Leave a Comment

Your email address will not be published. Required fields are marked *