ಇಸ್ರೇಲ್ ಮೇಲೆ ಹಮಾಸ್ ದಾಳಿ/ ನಾವು ಇಸ್ರೇಲ್ ಜೊತೆಗಿದ್ದೇವೆ ಎಂದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಇಸ್ರೇಲಿನ ಮೇಲೆ ಹಮಾಸ್ ನಡೆಸಿರುವ ಭಯೋತ್ಪಾದಕ ದಾಳಿಯಿಂದ ಆಘಾತವಾಗಿದ್ದು, ಈ ಸಂದರ್ಭದಲ್ಲಿ ಭಾರತ ಇಸ್ರೇಲಿನ ಜೊತೆಗೆ ಇರುತ್ತದೆ ಎಂದು ಭಾರತದ ಪ್ರಧಾನಿ ಮೋದಿ ಹೇಳಿದ್ದಾರೆ.

Ad Widget ... ..

ಪ್ಯಾಲೆಸ್ಟೈನ್ ನ ಸಶಸ್ತ್ರ ಗುಂಪು ಹಮಾಸ್ ಇಸ್ರೇಲಿನ ಮೇಲೆ ರಾಕೆಟ್ ದಾಳಿ ನಡೆಸಿದೆ. ಇದರಲ್ಲಿ 22 ಜನರು ಮೃತರಾಗಿದ್ದು, 500 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

Ad Widget

ಇಸ್ರೇಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅಲ್ಲಿನ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಇಂತಹ ಕಷ್ಟದ ಸಮಯದಲ್ಲಿ ನಾವು ಇಸ್ರೇಲಿನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *