ಸುಳ್ಯ:ಬಸ್ ಹತ್ತಲು ಯತ್ನಿಸಿದ ಪ್ರಯಾಣಿಕ ಆಯತಪ್ಪಿ ಬಿದ್ದು ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ನಡೆದಿದೆ.

. Ad Widget . Ad Widget

ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಅವರು ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

. Ad Widget . . Ad Widget . Ad Widget

ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮತ್ತೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪಿದ್ದಾರೆ ತಿಳಿದು ಬಂದಿದೆ.

Leave a Comment

Your email address will not be published. Required fields are marked *