ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಬಲಿ

ಸಮಗ್ರ ನ್ಯೂಸ್:ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ.

Ad Widget ... ..

ಅಪಘಾತದಲ್ಲಿ ಅಯಾನ್ (3) ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಅ. 8ರಂದು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ.

Ad Widget

ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸ್ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಘಟನೆಯಿಂದ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಮೃತ ಪಟ್ಟಿದೆ. ಈ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *