ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಅ. ೧೦ರಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ವಾತಾವರಣ ಕಂಡು ಬಂದಿದೆ. ಅಕ್ಟೋಬರ್ 10ರಿಂದ ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮಗನರ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ.

Ad Widget ... ..

ಇದೇ ಭಾಗದ ಉಳಿದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆಗಳು ಇವೆ ಎನ್ನಲಾಗಿದೆ.

Ad Widget

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಗುರುವಾರದವರೆಗೆ ಹಗುರದಿಂದ ಸಾಧಾರಣವಾಗಿ ಮಳೆ ಸುರಿಯುವ ಲಕ್ಷಣಗಳು ಇವೆ. ಇನ್ನೂ ಉತ್ತರ ಒಳನಾಡಿನಲ್ಲಿ ಶುಷ್ಕ ಮತ್ತು ಸೆಕೆಯ ವಾತಾವರಣವೇ ಮುಂದುವರಿಯುವ ಮುನ್ಸೂಚನೆ ಇದೆ.

ಗುರುವಾರ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತುಂತುರು ಮಳೆ ಬರಬಹುದು. ಉಳಿದೆಲ್ಲ ಒಣ ಹವೆ, ಅಧಿಕ ಬಿಸಿಲಿನ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಮುಂಗಾರು ಮಳೆ ಸುರಿಸುವ ಮಾರುಗಳು ಬಹುತೇಕ ಅಂತ್ಯಗೊಂಡಿದ್ದು, ಹಿಂಗಾರು ಮಳೆ ಆರಂಭವಾಗಿದೆ. ಇದರ ಬೆನ್ನಲ್ಲೆ ರಾಜ್ಯದ ವಿವಿಧೆಡೆ ಮಳೆ ಆಗುತ್ತಿದೆ. ಕೈಕೊಟ್ಟ ಹಿಂಗಾರು ಮಳೆಯಿಂದ ಸಂಕಷ್ಟ ಅನುಭವಿಸಿದ ರಾಜ್ಯದ ರೈತರು ಹಿಂಗಾರು ಬಿತ್ತನೆಗೆ ಮಳೆಗಾಗಿ ಕಾಯುತ್ತಿದ್ದಾರೆ.

ಹವಾಮಾನ ಇಲಾಖೆ ತಿಳಿಸಿರುವ ಮುಂದಿನ ಮೂರು ತಿಂಗಳಲ್ಲಿ ಹಿಂಗಾರು ಮಳೆ ವಾಡಿಕೆ ಯಷ್ಟು ಸುರಿಯಲಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ ಆಗಲಿದೆ. ಉತ್ತರ ಒಳನಾಡಿಗೆ ವಾಡಿಕೆಯಷ್ಟು ಮಳೆ ಆದರೆ, ಕಲ್ಯಾಣ ಕರ್ನಾಟಕ ಜಿಲ್ಲೆಗಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಬಹುದು ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ಮಹಾದೇವಪುರ ವಲಯ ವ್ಯಾಪ್ತಿಯಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಭಾನುವಾರ ಸಂಜೆಯಿಂದ ಆರಂಭವಾದ ಜಿಟಿ ಜಿಟಿ ಮಳೆ ತಡರಾತ್ರಿ ಜೋರಾಗಿ ಸುರಿದಿದೆ. ಪಶ್ಚಿಮ ವಲಯ, ಯಲಹಂಕ, ದಕ್ಷಿಣ ವಲಯಗಳ ಬಡಾವಣೆಗಳಲ್ಲಿಯೂ ಉತ್ತಮ ಮಳೆ ದಾಖಲಾಗಿದೆ.

Leave a Comment

Your email address will not be published. Required fields are marked *