ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದುಪಡಿಸಿ/ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆಗ್ರಹ

ಸಮಗ್ರ ನ್ಯೂಸ್: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯು ರಾಜಕೀಯ ಪಕ್ಷಗಳ ಒತ್ತಡಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ರದ್ದುಪಡಿಸಬೇಕು. ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಪ್ರಾಧಿಕಾರ ಹಾಗೂ ಸಮಿತಿ ರಚಿಸಬೇಕು’ ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ಆಗ್ರಹಿಸಿದೆ.

Ad Widget ... ..

ನೀರಿನಲ್ಲಿ ಪಾಲು ಕೇಳುವ ತಮಿಳುನಾಡಿನವರು ಅರಣ್ಯ ಸಂರಕ್ಷಣೆ ಮಾಡಲು ಕರ್ನಾಟಕ ಸರ್ಕಾರಕ್ಕೆ ವರ್ಷಕ್ಕೆ 12,000 ಕೋಟಿ ಹಣ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಮತ್ತು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಒಪ್ಪಿಗೆ ನೀಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಲಾಗಿದೆ.

Ad Widget

ನಿಯೋಗದಲ್ಲಿ ಸಂಚಾಲಕ ಕುರುಬೂರು ಶಾಂತಕುಮಾರ್, ಸಮಿತಿಯ ಮುಖಂಡರಾದ ಗುರುದೇವ್ ನಾರಾಯಣ್, ಮೋಹನ್‌ ದಾಸರಿ ಹಾಗೂ
ವಿಜಯ್‌ ಸಿಂಗ್‌ ಇದ್ದರು.

Leave a Comment

Your email address will not be published. Required fields are marked *