ಸಮಗ್ರ ನ್ಯೂಸ್: ಹಮಾಸ್ ಮತ್ತು ಇಸ್ರೇಲ್‌ನ ನಡುವಿನ ಯುದ್ಧ ತೀವ್ರವಾಗಿ ಹೆಚ್ಚುತ್ತಿರುವ ಹದಗೆಡುತ್ತಿರುವ ಹಿನ್ನೆಲೆ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅವರಿಗಾಗಿಯೇ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ.
ಇಸ್ರೇಲ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ತೆರೆದಿದ್ದೇವೆ. ಇಸ್ರೇಲ್‌ನಲ್ಲಿ ನಿಮ್ಮ ಕುಟುಂಬದವರು ಯಾರಾದರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದಾದರೆ ತಕ್ಷಣವೇ ತುರ್ತು ಸಹಾಯವಾಣಿಗೆ ಕರೆ ಮಾಡಬೇಕು. ಪ್ರತೀ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ ಎಂದು ರಾಜ್ಯ ಸರ್ಕಾರ ಹೇಳಿದೆ.
ಕೇಂದ್ರದ ತುರ್ತು ಸಹಾಯವಾಣಿ ಸಂಪರ್ಕ ಸಂಖ್ಯೆ 080 – 22340676, 080 – 22253707







