ಸಮಗ್ರ ನ್ಯೂಸ್: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿ ತನ್ನ ವಾಸದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 9ರಂದು ವರದಿಯಾಗಿದೆ.
ಮೃತ ಹನುಮಂತ (24) ಇವರು ಮೂಲತಃ ಬಾಗಲಕೋಟೆಯವರು ಎಂದು ತಿಳಿದುಬಂದಿದೆ. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿ ಕೂಡ ಆಗಿದ್ದಾರೆ.
ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಮೂಡಬಿದಿರೆ ಪೋಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.






