Ad Widget .

2 ತಿಂಗಳಿನಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಪೌರಕಾರ್ಮಿಕನೊಬ್ಬ ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಕೋಲಾರ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶಿವಕುಮಾರ್‌ ಆತ್ಮಹತ್ಯೆಗೆ ಯತ್ನಿಸಿದ ಪೌರ ಕಾರ್ಮಿಕ. ಇನ್ನು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರಮ್ಮ ಬಡಾವಣೆ ನಿವಾಸಿಯಾಗಿರುವ ಶಿವಕುಮಾರ್‌ ಎರಡು ತಿಂಗಳಿಂದ ವೇತನ ಸಿಕ್ಕಿಲ್ಲ, ಕೆಲಸಕ್ಕೆ ಹೋಗಿದ್ದರೂ ಗೈರು ಹಾಜರಿ ಎಂದು ಹಾಕಿದ್ದಾರೆ. ಜೊತೆಗೆ ಆರೋಗ್ಯ ನಿರೀಕ್ಷಕ ಹಾಗೂ ಆಯುಕ್ತರು ಪತಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆತನ ಪತ್ನಿ ರುಕ್ಮಿಣಿ ಆರೋಪಿಸಿದ್ದಾರೆ.

Ad Widget . Ad Widget . Ad Widget .

ಅ. 10ರ ಮಧ್ಯಾಹ್ನ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಬಿದ್ದಿದ್ದ ಪೌರಕಾರ್ಮಿಕ ಶಿವಕುಮಾರ್​ನನ್ನು ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಕುಮಾರ್​ಗೆ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಪತಿ 25 ರಿಂದ 30 ವರ್ಷಗಳಿಂದ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದರೆ, ಇತ್ತ ಆತನ ಪತ್ನಿ ರುಕ್ಮಿಣಿ ಕೂಡ ನಗರಸಭೆ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *