ದೇವರಮನೆಗೆ ತೆರಳಿದ‌ ಬೆಳ್ತಂಗಡಿಯ ಯುವಕ ಕಾಣೆ

ಸಮಗ್ರ ನ್ಯೂಸ್: ಮೂಡಿಗೆರೆಯ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ಎಂದು ಗುರುತಿಸಲಾಗಿದೆ.

Ad Widget ... ..

ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ದೇವರಮನೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಈ ನಡುವೆ ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದಾರೆ. ಈ ವೇಳೆ ದೀಕ್ಷಿತ್ ಕಾರು ಹತ್ತದೆ ತೆರಳಿದ್ದು, ಯುವಕ ಕಣ್ಮರೆಯಾಗಿದ್ದಾನೆ.

Ad Widget

ಅ. 10ರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *