ಬಂಟ್ವಾಳ: ಕಾರು ಡಿಕ್ಕಿ| ಯುವತಿ ಮೃತ್ಯು

ಸಮಗ್ರ ನ್ಯೂಸ್: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಅ. 12ರಂದು ಸಂಜೆ ಸುಮಾರು 6.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

Ad Widget ... ..

ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಬಿಟ್ಟು ದಾಸಕೋಡಿ ಎಂಬಲ್ಲಿ ಬಸ್ಸ್ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Ad Widget

ಡಿಕ್ಕಿಯಾದ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು, ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *