ಒಲಿಂಪಿಕ್ಸ್ ಗೆ ಕ್ರಿಕೆಟ್ ಸೇರ್ಪಡೆ/ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಘೋಷಣೆ

ಸಮಗ್ರ ನ್ಯೂಸ್: ಅಮೆರಿಕದ ಲಾಸ್ ಏಂಜಲಿಸ್‌ನಲ್ಲಿ 2028 ರಲ್ಲಿ ನಡೆಯಲಿರುವ ಜಾಗತಿಕ ಒಲಿಂಪಿಕ್ಸ್‌ಗೆ ಕ್ರಿಕೆಟ್ ಅನ್ನು ಸೇರ್ಪಡೆ ಮಾಡಲಾಗಿದೆ.

Ad Widget ... ..

ಮುಂಬೈನಲ್ಲಿ ಒಲಿಂಪಿಕ್ಸ್ ಸಮಿತಿಯ ಕಾರ್ಯಕಾರಿ ಮಂಡಳಿಯ ಸಭೆ ನಡೆದ ಎರಡು ದಿನಗಳ ಬಳಿಕ ಮಾತನಾಡಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಅಧ್ಯಕ್ಷ, ಥಾಮಸ್ ಬಾಚ್, ಬೇಸ್‌ಬಾಲ್/ ಸಾಫ್ಟ್ಬಾಲ್, ಫ್ಲ್ಯಾಗ್ ಫುಟ್‌ಬಾಲ್ ಜೊತೆಗೆ 5 ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ ಕ್ರಿಕೆಟ್ ಸಹ ಒಂದು. ಕ್ರಿಕೆಟ್ ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನು ಸಂಘಟಕ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

Ad Widget

ಲಾಸ್ ಏಂಜಲಿಸ್ ಒಲಿಂಪಿಕ್ಸ್ ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತವು ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ.

Leave a Comment

Your email address will not be published. Required fields are marked *