ಸಮಗ್ರ ನ್ಯೂಸ್: ನಗರದ ಇತಿಹಾಸ ಪ್ರಸಿದ್ದ ನಾಲ್ಕು ಶಕ್ತಿದೇವತೆಗಳಾದ ಕುಂದುರುಮೊಟ್ಟೆ ಚೌಟಿಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ಹಾಗೂ ಕಂಚಿ ಕಾಮಾಕ್ಷಿಯಮ್ಮ ದೇವತೆಗಳ ಕರಗಗಳನ್ನು ಅ. 15ರ ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವುದು.
ಮಧ್ಯಾಹ್ನ ನಾಲ್ಕು ಶಕ್ತಿದೇವತೆಗಳ ದೇವಾಲಯದಿಂದ ವ್ರತಧಾರಿಗಳೊಂದಿಗೆ ದೇವಾಲಯ ಸಮಿತಿಯವರು ಮಂಗಳವಾದ್ಯ ಸಹಿತ ಕರಗ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಹೊತ್ತು, ಮೆರವಣಿಗೆಯ ಮೂಲಕ ಬನ್ನಿ ಮಂಟಪಕ್ಕೆ ತೆರಳುತ್ತಾರೆ.
ಅಗತ್ಯ ಪೂಜಾ ವಿಧಿ-ವಿಧಾನಗಳೊಂದಿಗೆ ಅತ್ಯಾಕರ್ಷಕವಾಗಿ ಕರಗಗಳನ್ನು ಕಟ್ಟಿ, ಹೂವುಗಳಿಂದ ಅಲಂಕರಿಸಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಿದ್ದಾರೆ. ಸಂಜೆ ನಗರದ ಪಂಪಿನಕೆರೆ ಬಳಿ ಮಡಿಕೇರಿ ನಗರ ದಸರಾ ಸಮಿತಿ, ದಸರಾ ಉಪ ಸಮಿತಿ, ದಶಮಂಟಪ ಸಮಿತಿಯ ಪದಾಧಿಕಾರಿಗಳು ಸಾರ್ವಜನಿಕ ಪ್ರಮುಖರು ಜನಪ್ರತಿನಿಧಿಗಳು ಅಧಿಕಾರಿಗಳು ಸಂಜೆ ಕರಗಗಳಿಗೆ ಪೂಜೆ ಸಲ್ಲಿಸುತ್ತಾರೆ.