ಸಮಗ್ರ ನ್ಯೂಸ್: ಗಾಜಾದಲ್ಲಿ ಬಂಧನಕ್ಕೊಳದಾವರ ಬಗ್ಗೆ ಸರ್ಕಾರವು ನಿರ್ಲಕ್ಷಿಸಿದೆ ಎಂಬ ಟೀಕೆಗಳು ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ.
ಹಮಾಸ್ ಉಗ್ರರ ದಾಳಿಯಿಂದಾಗಿ 1300ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಾಯಗೊಂಡಿದ್ದಾರೆ. ಅದಲ್ಲದೇ ಅನೇಕ ಮಂದಿಯನ್ನು ಹಮಾಸ್ ಉಗ್ರರು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಇವರನ್ನು ಇಸ್ರೇಲ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಟೀಕೆಗಳು ಕೇಳಿ ಬಂದಿತ್ತು. ಇಂತಹ ಸಂದರ್ಭದಲ್ಲಿ ನೆತನ್ಯಾಹು ಮೊದಲ ಬಾರಿಗೆ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ.
ಭಾನುವಾರ ಸಂಜೆ ಇಸ್ರೇಲಿ ಒತ್ತೆಯಾಳುಗಳ ಸಂಬಂಧಿಕರನ್ನು ನೆತನ್ಯಾಹು ಅವರು ಭೇಟಿ ಮಾಡಿದ ಫೋಟೋಗಳನ್ನು ಇಸ್ರೇಲ್ ಪ್ರಧಾನಿ ಕಚೇರಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದೆ. ಇದರಲ್ಲಿ ಅವರು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುತ್ತಿರುವುದು ಕಂಡುಬಂದಿದ್ದು, ಇದು ಅವರ ಮೇಲಿನ ಟೀಕೆಗಳಿಗೆ ಪ್ರತ್ಯುತ್ತರ ನೀಡಿದಂತಾಗಿದೆ.