ಇಂದು ತುಲಾ ಸಂಕ್ರಮಣ| ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಕಲ ಸಿದ್ದತೆ

ಸಮಗ್ರ ನ್ಯೂಸ್: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.

Ad Widget ... ..

ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.

Ad Widget

ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಸಂಜೆ 4 ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ.

ಇಂದು ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದರೆ ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್​ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.

Leave a Comment

Your email address will not be published. Required fields are marked *