Ad Widget .

ಅರಣ್ಯಾಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಜಾಮೀನು ರಹಿತ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕರ್ತವ್ಯ ನಿರತ , ಯುನಿಫಾರ್ಮ್ ನಲ್ಲಿದ್ದ ವಲಯ ಅರಣ್ಯಾಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದ್ದು, ಧರ್ಮಸ್ಥಳ ಪೊಲೀಸರು ಸೆಕ್ಷನ್ 353 ರಂತೆ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜಾರ ವಿರುದ್ದ ಪುತ್ತೂರು ಸಹಾಯಕ ಆಯುಕ್ತರಿಗೂ ದೂರು ನೀಡಲಾಗಿದೆ.

Ad Widget . Ad Widget . Ad Widget .

ಪ್ರಕರಣದ ವಿವರ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಕೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ – ಕುದ್ದ ನಿವಾಸಿ ಲೋಲಾಕ್ಷ ಬಿನ್ ದೇವಣ್ಣ ಗೌಡರು ರವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿಗಳು ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು.

ಶಾಸಕ ಹರೀಶ್ ಪೂಂಜ ಅ.7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳ ಕ್ರಮದ ವಿರುದ್ದ ಪ್ರತಿಭಟನೆ ನಡೆಸಿದ್ದರು. ಸ್ಥಳದಲ್ಲಿ ಯುನಿಫಾರ್ಮ್ ನಲ್ಲಿದ್ದ ಆರ್.ಎಫ್.ಓ ಬಗ್ಗೆ ‘ಅವನು ಯಾರ್ರಿ ಲೋಫರ್ ನನ್ ಮಗ’ ಎಂದು ಎಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ವಿಡಿಯೋ ರಾಜ್ಯ ಕಾಂಗ್ರೇಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿತ್ತು.

ಅರಣ್ಯ ಇಲಾಖೆ ಜಾಗವನ್ನು ಒತ್ತುವರಿ ನಡೆಸಿದವರು ಹಾಗೂ ಇದಕ್ಕೆ ಸಹಕರಿಸಿದ 11 ಜನರ ವಿರುದ್ಧ ಅ.7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.

ಅ.9 ರಂದು ಮತ್ತೆ ಮೇಲಾಧಿಕಾರಿಗಳ ಆದೇಶದಂತೆ ಎಸಿಎಫ್ ಸುಬ್ಬಯ್ಯ ನಾಯ್ಕ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ.ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ದೇವಣ್ಣ ಗೌಡರವರ ಅವರ ಮನೆಯ ಶೆಡ್‌ ತೆರವಿಗೆ ಮುಂದಾಗಿದ್ದರು. ಜಿಲ್ಲೆಯ ಹಲವು ಶಾಸಕರು ಪ್ರಕರಣದಲ್ಲಿ ದೇವಣ್ಣ ಗೌಡರ ಅವರ ಪರ ನಿಂತು ಶೆಡ್ ತೆರವುಗೊಳಿಸದಂತೆ ನೋಡಿಕೊಂಡರು.

ಈ ಸಂದರ್ಭ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ.ರವರಿಗೆ ಅವಾಚ್ಯ ಪದ ಬಳಸಿ ನಿಂದಿಸಿರುವ ಬಗ್ಗೆ ಅಕ್ಟೋಬರ್ 13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *