ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಐವರ ಮೇಲೆ ಹರಿದ ಕಾರು|ಓರ್ವ ಮೃತ್ಯು, ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಮಂಗಳೂರಿನ ಲೇಡಿ ಹಿಲ್‌ ಬಳಿ ಫುಟ್ ಪಾತ್‌ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರ ಗುಂಪಿನ ಮೇಲೆ ವಾಹನ ಹರಿಸಿ ಒರ್ವ ಮಹಿಳೆ ಸಾವನ್ನಪ್ಪಿದ್ದು ಒರ್ವ ಬಾಲಕಿ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Ad Widget ... ..

ಅಪಘಾತದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೂಪಶ್ರೀ(23) ಎಂಬ ಯುವತಿ ಸಾವನ್ನಪ್ಪಿದ್ದಾರೆ. ಸುರತ್ಕಲ್ ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

Ad Widget

ಸ್ವಾತಿ(26) ಹಿತನ್ವಿ(16),ಕಾರ್ತಿಕಾ(16) ಮತ್ತು ಯತಿಕಾ(12) ಗಾಯಗೊಂಡವರು. ಇಯಾನ್ ಕಾರ್ ಚಾಲಕ ಅತೀ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಕಾರಿನೊಂದಿಗೆ ಪರಾರಿಯಾದ ಕಾರು ಚಾಲಕ ಕಮಲೇಶ್ ಬಲದೇವ್ ಬಳಿಕ ತಂದೆಯ ಜೊತೆ ಠಾಣೆಗೆ ಬಂದು ಶರಣಾಗಿದ್ದಾನೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *