Ad Widget .

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(ಇ) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆ ನ. 1 ರಿಂದ ಮೇ 31ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ ಸಹಾಯಕ ಆಯುಕ್ತ ಆರ್. ದೇವರಾಜ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಅಗಲೀಕರಣಕ್ಕೆ ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ. 2020ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದೀಗ ಹೆದ್ದಾರಿ ಪ್ರಾಧಿಕಾರವು ಸಹ ಸಂಚಾರ ದಟ್ಟಣೆ ಕಡಿಮೆ ಮಾಡಿ ಕಾಮಗಾರಿ ಮುಗಿಸಲು ವಾಹನ ಸಂಚಾರ ನಿರ್ಬಂಧಿಸುವಂತೆ ಕೋರಿದೆ. ಈಗಾಗಲೇ ಅಗಲೀಕರಣದ 33 ಕಿಲೋಮೀಟರ್ ವ್ಯಾಪ್ತಿಯಲ್ಲಿ 26 ಕಿ.ಮೀ. ವರೆಗೂ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ವಾಹನಗಳಿಗೆ ನಿರ್ಬಂಧಿಸುತಿದ್ದೇವೆ ಎಂದಿದ್ದಾರೆ.

Ad Widget . Ad Widget . Ad Widget .

ಇನ್ನು ವಾಹನ ಸವಾರರಿಗೆ ಬದಲಿ ವ್ಯವಸ್ಥೆ ಕಲ್ಪಿಸಿದ್ದು, ಕುಮಟಾ-ದೊಡ್ಮನೆ-ಸಿದ್ದಾಪುರ-ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೊನ್ನಾವರ-ಮಾವಿನಗುಂಡಿ, ಸಿದ್ದಾಪುರ, ಶಿರಸಿ ಮಾರ್ಗದಲ್ಲಿ ಎಲ್ಲಾ ತರಹದ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ.

Leave a Comment

Your email address will not be published. Required fields are marked *