Ad Widget .

ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಎಂಎಲ್’ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಒತ್ತಾಯ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದೆ ಇರುವುದರಿಂದ ಹೊರ ಭಾಗದಿಂದ ಜಿಲ್ಲೆಗೆ ಆಗಮಿಸುವ ಕಾರ್ಮಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಒತ್ತಾಯಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .


ಇಷ್ಟು ದಿನಗಳೇ ಕಳೆದರೂ ಕೊಡಗು ಕೋವಿಡ್ ಮುಕ್ತವಾಗುತ್ತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಪಾಸಿಟಿವಿಟಿ ಪ್ರಮಾಣ ಶೇ.೫ ಕ್ಕಿಂತ ಕೆಳಗಿಳಿಯುತ್ತಿಲ್ಲ. ಪರಿಸ್ಥಿತಿ ಹೀಗಿದ್ದರೂ ಹೊರ ಜಿಲ್ಲೆಗಳಿಂದ ಗುಂಪು ಗುಂಪಾಗಿ ಕಾರ್ಮಿಕರನ್ನು ಕರೆ ತರಲಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇರಲು ಇದೂ ಕೂಡ ಒಂದು ಕಾರಣವೆಂದು ಅಭಿಪ್ರಾಯಪಟ್ಟಿದ್ದಾರೆ.

Ad Widget . Ad Widget . Ad Widget .


ಜಿಲ್ಲೆಯ ಪ್ರತಿ ಚೆಕ್‌ಪೋಸ್ಟ್‌ನಲ್ಲಿ ಕಡ್ಡಾಯವಾಗಿ ಎಲ್ಲರನ್ನು ತಪಾಸಣೆಗೆ ಒಳಪಡಿಸಬೇಕು. ಕಾರ್ಮಿಕರು ಕೋವಿಡ್ ನೆಗೆಟಿವ್ ವರದಿ ತರುವುದು ಕಡ್ಡಾಯವೆಂದು ಜಿಲ್ಲಾಡಳಿತ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಕಳೆದ ೨೪ ಗಂಟೆಗಳಲ್ಲಿ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಸೋಮವಾರಪೇಟೆ ತಾಲೂಕಿನ ಒಂದೇ ಗ್ರಾಮದಲ್ಲಿ ೬೦ ಜನ ಸೋಂಕಿತರು ಇರುವುದು ಕಂಡು ಬಂದಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಹೊರಗಿನ ಕಾರ್ಮಿಕರಿಂದ ಸೋಂಕು ವ್ಯಾಪಿಸುವ ಸಾಧ್ಯತೆಗಳು ಹೆಚ್ಚು ಎಂದು ತಿಳಿಸಿದ್ದಾರೆ.


ಪ್ರವಾಸಿಗರು ಬೇಡ: ಕೊಡಗು ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರೆದಿದ್ದರೂ ಪ್ರವಾಸಿಗರು ಆಗಮಿಸಲು ಆರಂಭಿಸಿದ್ದಾರೆ. ಜು.5 ರವರೆಗೆ ಕೋವಿಡ್ ಲಾಕ್‌ಡೌನ್ ಮಾರ್ಗಸೂಚಿ ಜಾರಿಯಲ್ಲಿರುವುದರಿಂದ ಪ್ರವಾಸಿಗರು ಬಾರದಂತೆ ತಡೆಯು ಕೆಲಸವನ್ನು ಜಿಲ್ಲಾಡಳಿತ ಮಾಡಬೇಕೆಂದು ವೀಣಾಅಚ್ಚಯ್ಯ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *