ಸುಳ್ಯ ಮೂಲದ ಉದ್ಯಮಿಯ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ಮೂಲದ ಉದ್ಯಮಿಯೋರ್ವರ ಪತ್ನಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಗೆ ಶರಣಾದ ಘಟನೆ ಅ.26 ರಂದು ಬೆಂಗಳೂರಿನಲ್ಲಿ ನಡೆದಿದೆ.

Ad Widget ... ..

ಕನಕಮಜಲು ಗ್ರಾಮದ , ಪ್ರಸ್ತುತ ಬೆಂಗಳೂರಿನಲ್ಲಿ ಡೈರಿ ರೀಚ್ ಐಸ್ ಕ್ರೀಂನ ಉದ್ಯಮಿಯಾಗಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಇವರ ಪತ್ನಿ ಐಶ್ವರ್ಯ(26) ಆತ್ಮಹತ್ಯೆಗೆ ಶರಣಾದವರು.

Ad Widget

ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ಅವರನ್ನು ರಾಜೇಶ್ ಅವರಿಗೆ ಸುಮಾರು 4 ವರ್ಷದ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಬಳಿಕ ಐಶ್ವರ್ಯ ರವರು ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಪತಿ ರಾಜೇಶ್ ಸ್ವಂತ ಐಸ್ ಕ್ರೀಮ್ ಪಾರ್ಲರ್ ನಡೆಸಿಕೊಂಡು ಬೆಂಗಳೂರಿನಲ್ಲೇ ವಾಸವಾಗಿದ್ದರು ಎನ್ನಲಾಗಿದೆ.

ಐಶ್ವರ್ಯ ಳ ತಂದೆ ತಾಯಿ ಕೊಡ ಬೆಂಗಳೂರಿನಲ್ಲೇ ನೆಲೆಸಿದ್ದು, ಇದೀಗ ಕೆಲ ಸಮಯಗಳಿಂದ ಐಶ್ವರ್ಯ ತನ್ನ ತಾಯಿ ಮನೆಗೆ ಬಂದಿದ್ದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *