ಸಮಗ್ರ ನ್ಯೂಸ್: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.
ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
ಇಂದು ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.






