ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಹಮೂನ್ ಚಂಡಮಾರುತ ಉಂಟಾಗಿದ್ದು, ಇದರ ಪ್ರಭಾವ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಬೀರಲಿದೆ. ತಮಿಳುನಾಡು, ಕೇರಳ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಭಾರಿ ಮಳೆಯಾಗಲಿದೆ.
ಅಕ್ಟೋಬರ್ 29ರಂದು ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತದ ಪರಿಣಾಮದಿಂದ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಮಳೆ ಬೀಳುವ ಮುನ್ಸೂಚನೆ ನೀಡಿದೆ.