ಸಮಗ್ರ ನ್ಯೂಸ್: ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್‍ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಚಂದ್ರಬಾಬು ನಾಯ್ಡು ಇಂದು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು.
ಚಂದ್ರಬಾಬು ನಾಯ್ಡು ಅನಾರೋಗ್ಯದ ಕಾರಣಕ್ಕಾಗಿ ಜಾಮೀನು ಪಡೆದುಕೊಂಡಿದ್ದಾರೆ. ನಾಯ್ಡು ಅವರಿಗೆ ಶಸ್ತ್ರಚಿಕಿತ್ಸೆ ಆಗಬೇಕಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಅವರ ಪರ ವಕೀಲರು ವಾದಿಸಿದ್ದರು. ಹೀಗಾಗಿ ನಾಲ್ಕು ವಾರಗಳ ತಾತ್ಕಾಲಿಕ ಜಾಮೀನು ನೀಡಲಾಗಿದೆ. 53 ದಿನಗಳ ಜೈಲುವಾಸದಿಂದ ಹೊರಬಂದ ನಾಯ್ಡು ಅವರನ್ನು ಬೆಂಬಲಿಗರು ಸಂಭ್ರಮದಿಂದ ಸ್ವಾಗತಿಸಿದ್ದಾರೆ.