ಯುವ ಸಂಗೀತ ನಿರ್ದೇಶಕ ಮನೋಜ್ ವಸಿಷ್ಠ ನಿಧನ

ಸಮಗ್ರ ನ್ಯೂಸ್: ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯುವ ಗಾಯಕ, ಸಂಗೀತ ಸಂಯೋಜಕ ಮನೋಜ್ ವಸಿಷ್ಠ ಅನಾರೋಗ್ಯದ ಕಾರಣದಿಂದಾಗಿ ನಿಧನರಾಗಿದ್ದಾರೆ.

Ad Widget ... ..

ತೀವ್ರ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು, ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನ.1ರಂದು ಇಹಲೋಕ ತ್ಯಜಿಸಿದ್ದಾರೆ.

Ad Widget

ಕನ್ನಡ ಕಿರುತೆರೆಯ ಬಹುತೇಕ ರಿಯಾಲಿಟಿ ಶೋಗಳಲ್ಲಿ ಮನೋಜ್ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಪ್ರವೀಣ್ ಡಿ ರಾವ್ ಅವರ ಅನೇಕ ಧಾರಾವಾಹಿ ಶೀರ್ಷಿಕೆಗಳಿಗೆ ಮನೋಜ್ ವಸಿಷ್ಠ ಕೆಲಸ ಮಾಡಿದ್ದಾರೆ. ಪತ್ನಿ ಅರುಂಧತಿ ಕೂಡ ಗಾಯಕಿ. ಕನ್ನಡ ಕೋಗಿಲೆ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳಲ್ಲಿ ಅರುಂಧತಿ ಮತ್ತು ಮನೋಜ್ ಒಟ್ಟಿಗೆ ವೇದಿಕೆಯ ಮೇಲೆ ಕಾಣಿಸಿಕೊಂಡಿದ್ದಾರೆ.

ಅಗಲಿದ ಮನೋಜ್ ಅವರಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಶೃದ್ಧಾಂಜಲಿ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *