ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನ.8ರಂದು ಸುಳ್ಯದ ವಿದ್ಯಾಮಾತಾ ಅಕಾಡಮಿಯಲ್ಲಿ ನಡೆಯಲಿದೆ.
ನಿವೃತ್ತ ಲೋಕಾಯುಕ್ತ ಜಸ್ಟಿಸ್ ಸಂತೋಷ್ ಹೆಗ್ಡೆ ಅವರು ವಿದ್ಯಾಮಾತಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ತರಗತಿ ಉದ್ಘಾಟಿಸುವರು ಎಂದು ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೆಪ್ಟೆಂಬರ್ 28 ರಂದು ಶುಭಾರಂಭಗೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನವೆಂಬರ್ 8ರಂದು ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಪ್ರವೇಶಾತಿಯನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳಿಗಾಗಿ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.
ಪ್ರಥಮ ಬ್ಯಾಚ್‌ನ ತರಬೇತಿಯನ್ನು ಜಸ್ಟಿಸ್ ಸಂತೋಷ್ ಹೆಗ್ಡೆಯವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಲಿದ್ದಾರೆ. ಪ್ರಸ್ತುತ ನಮ್ಮ ದೇಶದ ವಿವಿಧ ಸಮಸ್ಯೆಗಳ ಬಗ್ಗೆ ಹಾಗೂ ಭ್ರಷ್ಟಾಚಾರ ಮತ್ತಿತರ ವಿಷಯದ ಬಗ್ಗೆ ಪರಸ್ಪರ ಸಂವಾದ ನಡೆಯಲಿದೆ. ಸಂವಾದ ಕಾರ್ಯಕ್ರಮಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಮತ್ತು ನೆಹರು ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಆಮಂತ್ರಿಸಲಾಗಿದ್ದು, ಸಾರ್ವಜನಿಕರನ್ನು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಚಂದ್ರಾವತಿ ಬಡ್ಡಡ್ಕ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ನಿವೃತ್ತ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯಶ್ ರೈ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಆಡಳಿತಾಧಿಕಾರಿ ಚಂದ್ರಕಾಂತ್ ಮಾತನಾಡಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರವೇಶಾತಿ ಪ್ರಕ್ರಿಯೆ ಮುಂದುವರಿದಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪೂರ್ತಿ ಮಾಡಿದ ಉದ್ಯೋಗಾಕಾಂಕ್ಷಿಗಳು ನೋಂದಾವಣಿ ಮಾಡಿದ್ದಾರೆ. ಕೆಎಎಸ್, ಐಎಎಸ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉದ್ಯೋಗಾಕಾಂಕ್ಷಿಗಳನ್ನು ಸಜ್ಜುಗೊಳಿಸಲಾಗುವುದು. ಆಫ್ ಲೈನ್ ಹಾಗೂ ಆನ್‌ಲೈನ್ ತರಗತಿಗಳು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 9448527606/ 9620468869 ಎಂದು ಅವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ತರಬೇತುದಾರರಾದ ಚೈತ್ರ ಕಾಲ್ಪಾಡಿ ಉಪಸ್ಥಿತರಿದ್ದರು.