ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ| ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಆಲಿಸಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Ad Widget ... ..

ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. ವಿಸ್ತೃತವಾದ ಆದೇಶದ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಆದೇಶದಿಂದಾಗಿ ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದ ಶ್ರೀಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ.

Ad Widget

Leave a Comment

Your email address will not be published. Required fields are marked *