ಆಟೋ – ಟ್ಯಾಂಕರ್ ನಡುವೆ ಭೀಕರ ಅಪಘಾತ| ಸ್ಥಳದಲ್ಲೇ ನಾಲ್ವರು ಸಾವು

ಸಮಗ್ರ ನ್ಯೂಸ್: ಆಟೋ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.

Ad Widget ... ..

ವಾಡಿ ಪಟ್ಟಣದಿಂದ ನಾಲವಾರ ಕಡೆ ತೆರಳುತ್ತಿದ್ದ ಆಟೋಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad Widget

ನಾಲವಾರ ಗ್ರಾಮದ ವಾರ್ಡ್ ನಂ.1 ಅಕಾನಿ ಮಸ್ಜಿದ್ ಹತ್ತಿರದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ,(20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 10 ವರ್ಷದ ಬಾಲಕ ಮುಹಮ್ಮದ್ ಹುಸೇನ್ ಗಾಯಗೊಂಡಿದ್ದಾನೆ.

ಮೃತರು ನಾಲವಾರ ಗ್ರಾಮದ ನಿವಾಸಿಗಳಾಗಿದ್ದು, ಆಧಾರ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿ ಮರಳಿ ನಾಲವಾರ ಗ್ರಾಮಕ್ಕೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ತಿರುಮಲೇಶ್ ಕುಂಬಾರ್ ಪರಿಶೀಲಿನ ನಡೆಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *