ಸಮಗ್ರ ನ್ಯೂಸ್: ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ಹೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಬಾರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ (2019 ರಲ್ಲಿ) ರದ್ದುಗೊಳಿಸಿ ಆದೇಶ ಹೊರಡಿಸಿತ್ತು.
ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಕ್ಯಾಬಿನೆಟ್ನಲ್ಲೂ ಟಿಪ್ಪು ಜಯಂತಿ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೆಚ್ಕೆ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.