ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ.
ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆ CRPF ಸಿಬ್ಬಂದಿಯಾಗಿದ್ದ. ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ ಪ್ರವೀಣ್ ನನ್ನು ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿ ಅರೆಸ್ಟ್ ಮಾಡಲಾಗಿದೆ.
ನವೆಂಬರ್ 12ರಂದು ಉಡುಪಿಯ ಮನೆಗೆ ಬಂದು ಪಾಪಿ ತಾಯಿ ಮೂವರು ಮಕ್ಕಳಾದ ಹಸೀನಾ, ಅಫ್ನಾನ್, ಅಯ್ನಾಝ್, ಹಾಸೀಂ ಕೊಲೆ ಮಾಡಿದ್ದ.